ಪೀಣ್ಯ ದಾಸರಹಳ್ಳಿ: ಕ್ಷೇತ್ರದ ಮಾಜಿ ಶಾಸಕರಾದ ಆರ್. ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಮತ್ತು ಹೆಗ್ಗನಹಳ್ಳಿ ಬ್ಲಾಕ್ ಅಧ್ಯಕ್ಷರಾದ ಕೆ.ಎನ್.ರವಿಕುಮಾರ್ ಅವರ ನೇತೃತ್ವದಲ್ಲಿ ಪೀಣ್ಯ ಕೈಗಾರಿಕಾ ವಾರ್ಡ್ ನ ರಾಜಕುಮಾರ್ ಅವರಣದಲ್ಲಿ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮಕ್ಕೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ.ರಾಜೀವ್ ಗೌಡ ಆಗಮಿಸಿ ಈ ದೇಶದ ಅಭಿವೃದ್ಧಿ ಹಾಗೂ ಸಂವಿಧಾನ ಉಳಿವಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಹಾಗೂ ಈ ಬಾರಿ ನನಗೆ ಮತ ನೀಡಿ ಜಯಶೀಲರನ್ನಾಗಿ ಮಾಡಬೇಕೆಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ದಾಸರಹಳ್ಳಿ ಉಸ್ತುವಾರಿ ಮೋಹನ್, ಎಸ್. ಸಿ ವಿಭಾಗದ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಎಂ. ವೆಂಕಟೇಶ್, ಬಿಬಿಎಂಪಿ ಮಾಜಿ ಸದಸ್ಯ ಕೆ.ನಾಗಭೂಷಣ್, ಕೆ.ಸಿ ಅಶೋಕ್, ಕೀರ್ತನ್ ಕುಮಾರ್,
ಹಿರಿಯ ಕಾಂಗ್ರೆಸ್ ಮುಖಂಡ ನಂಜಪ್ಪ, ಡಿಸಿಸಿ ಉಪಾಧ್ಯಕ್ಷ ಮುನಿರಾಜು, ರುದ್ರೇಗೌಡ, ಡಿಸಿಸಿ ಸದಸ್ಯ ರೈ ಮತಣ್ಣ, ಡಾ.ಖಾಲಿದ್, ಮೈನಾರಿಟಿ ಬ್ಲಾಕ್ ಮಾಜಿ ಅಧ್ಯಕ್ಷ ಅಜ್ಗರ್ ಪಾಷಾ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮಾಂತೇಶ್ ಗೌಡ್ರು ಹಾಗೂ ಮುಂತಾದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.