ಮಂಗಳೂರು, ಏಪ್ರಿಲ್ 14: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ಶೋ ಪಕ್ಕದಲ್ಲೇ ಅಗ್ನಿ ಅವಘಡ ಸಂಭವಿಸಿದೆ.
ಮಂಗಳೂರಿನ ಲಾಲ್ಬಾಗ್ ಸರ್ಕಲ್ನ, ಕೆಎಸ್ಆರ್ಟಿಸಿ ಬಸ್ ಸ್ಟಾಂಡ್ ಮುಂಭಾಗದಲ್ಲಿರುವ ಭಾರತ್ ಮಾಲ್ ಬಳಿಯ ಮೆಡಿಕಲ್ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಪ್ರಧಾನಿ ಮೋದಿ ರೋಡ್ ಶೋನಿಂದ ಕೇವಲ 50 ಮೀಟರ್ ಅಂತರದಲ್ಲಿ ಅವಘಡ ಸಂಭವಿಸಿದ್ದು, ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿಯನ್ನು ನಂದಿಸಲಾಗಿದೆ.