ನವದೆಹಲಿ: ಸಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಎರಡು ರೈಲುಗಳು ಹೊತ್ತಿ ಉರಿದ ಘಟನೆ ದೆಹಲಿಯಲ್ಲಿ ನಡೆದಿದೆ.
ತುಘಲಕಾಬಾದ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಪಕ್ಕದಲ್ಲಿದ್ದ ಮತ್ತೊಂದು ರೈಲಿಗೂ ಆವರಿಸಿದೆ. ಆತಂಕದಿಂದ ಜನರು ರೈಲಿನಿಂದಿಳಿದು ಓಡಲು ಶರು ಮಾಡಿದ್ದಾರೆ. ಸ್ಥಳಕ್ಕೆ ೬ ಅಗ್ನಿಶಾಮಕ ವಾಹನಗಳು ಮತ್ತು ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.
ಬೆಂಕಿ ಆಕಸ್ಮಿಕ ಸಂಭವಿಸಲು ನಿಖರವಾದ ಕಾರಣ ತಿಳಿದುಬಂದಿಲ್ಲ. ಇದು ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡ ಬೆಂಕಿಯೋ ಅಥವಾ ಯಾರಾದರು ಕಿಡಿಗೇಡಿಗಳು ಬೆಂಕಿ ಹೊತ್ತಿಸಿ ಪರಾರಿಯಾದರೋ ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

