ಮಂಗಳೂರು: ಸ್ನೇಹಿತನೊಬ್ಬ ತನ್ನಿಂದ ಸಾಲ ಪಡೆದು, ಅದನ್ನು ವಾಪಸ್ ಮಾಡುತ್ತಿಲ್ಲ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಾನಂದವಾಡಿ ವ್ಯಾಪ್ತಿಯ ಕುಟ್ಟ ಗ್ರಾಮದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೂ ಮುನ್ನ ಕಾರಿನಲ್ಲಿ ಕುಳಿತು ವಿಡಿಯೋ ಮಾಡಿ ಅನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ತಮ್ಮ ಸ್ನೇಹಿತ ಬಾಪು ತನ್ನ ಆತ್ಮಹತ್ಯೆಗೆ ಕಾರಣ ಎಂದು ಹೇಳಿದ್ದಾರೆ.
ಬಾಪು ತನ್ನಿಂದ 20 ಲಕ್ಷ ಸಾಲ ಪಡೆದುಕೊಂಡಿದ್ದ. ಆದರೆ, ಅದನ್ನು ವಾಪಸ್ ಕೊಡದೆ ಸತಾಯಿಸುತ್ತಿದ್ದಾನೆ. ಇದರಿಂದ ನನಗೆ ಸಮಸ್ಯೆ ಹೆಚ್ಚಾಗಿದೆ ಎಂದು ವಿಡಿಯೋದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಹೇಳಿಕೊಂಡಿದ್ದಾರೆ. ಪ್ರಕರಣ ಸಂಬಂಧ ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

