ಸುದ್ದಿ

ಮನೆಯಲ್ಲಿ ನೇಣಿಗೆ ಶರಣಾದ ಅತಿಥಿ ಉಪನ್ಯಾಸಕಿ

Share It

ಹಾಸನ: ಮನೆಯಲ್ಲಿ ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿಯೂಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ.

ಸೋಮಶೇಖರ್, ಭಾಗ್ಯ ದಂಪತಿಯ ಪುತ್ರಿ ದೀಪಾ(34) ಆತ್ಮಹತ್ಯೆ ಮಾಡಿಕೊಂಡ ಯುವತಿ. ಇವರು ಚನ್ನರಾಯಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ​​​ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅವಿವಾಹಿತರಾಗಿದ್ದ ದೀಪಾ ಇಂದು(ಮೇ 9) ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Share It

You cannot copy content of this page