ಬೆಂಗಳೂರು: ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶವಾದ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಬಳಕೆಯಾಗುವ ರಾಸಾಯನಿಕ ತ್ಯಾಜ್ಯದ ನೀರನ್ನು ಸಂಸ್ಕರಣೆ ಮಾಡಲು ಜಲಮಂಡಳಿ ತೀಮರ್ಾನಿಸಿದೆ.
ಮಂಗಳವಾರ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಜಲಮಂಡಳಿಯಿಂದ ವಿಶೇಷವಾಗಿ ಆಹ್ವಾನಿಸಲಾಗಿದ್ದ ಜಪಾನ್ ಮೂಲದ ತಂತ್ರಜ್ಞಾನ ಸಂಸ್ಥೆಯ ಪ್ರತಿನಿಧಿಯೊಂದಿಗೆ ಭೇಟಿ ನೀಡಿದ ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್, ಕೈಗಾರಿಕಾ ಪ್ರದೇಶದಲ್ಲಿನ ರಾಸಾಯನಿಕ ತ್ಯಾಜ್ಯ ನೀರು ಉತ್ಪಾದನೆ ಹಾಗೂ ಅದರ ನಿರ್ವಹಣೆಯ ಬಗ್ಗೆ ವಿಸ್ತ್ರುತ ಮಾಹಿತಿ ಪಡೆದುಕೊಂಡರು.
ಹಲವಾರು ಕೈಗಾರಿಕೆಗಳು ರಾಸಾಯನಿಕ ತ್ಯಾಜ್ಯದ ನೀರನ್ನು ಉತ್ಪತ್ತಿ ಮಾಡುತ್ತವೆ. ಕೆಲವು ದೊಡ್ಡ ಸಂಸ್ಥೆಗಳು ತಮ್ಮದೇ ಆದ ಇಟಿಪಿ ಹೊಂದಿದ್ದು, ಸಂಸ್ಕರಣೆ ಮಾಡುತ್ತಿವೆ. ಆದರೆ ಹೆಚ್ಚಿನ ಸಂಖ್ಯೆಯ ಹಲವಾರು ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು, ತಮ್ಮದೇ ಆದ ಸಂಸ್ಕರಣಾ ವ್ಯವಸ್ಥೆ ಹೊಂದದೇ ಬೇರೆ ಮಾರ್ಗಗಳ ಮೂಲಕ ತ್ಯಾಜ್ಯ ನೀರು ವಿಲೇವಾರಿ ಮಾಡುತ್ತಿವೆ ಎಂದು ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಇಟಿಪಿ ನಿರ್ವಹಣೆಗೆ ಹೆಚ್ಚಿನ ಪ್ರಮಾಣದಲ್ಲಿ ಖಚರ್ು ಆಗುತ್ತದೆ. ನೀರಿನ ನಿರ್ವಹಣೆಗೆ ಹೆಚ್ಚಿನ ಖಚರ್ು ಭರಿಸುವುದರ ಮೂಲಕ ಉದ್ದಿಮೆಗಳು ತಮ್ಮ ಲಾಭದ ಪ್ರಮಾಣ ಕಡಿಮೆ ಮಾಡಿಕೊಳ್ಳಬೇಕಾದ ಅನಿವಾರ್ಯತೆಯಿದೆ. ಸಂಸ್ಕರಣೆ ಇಲ್ಲದೇ ಭೂಮಿಗೆ ಸೇರುವ ಕಲುಷಿತ ನೀರಿನಿಂದ ಜಲಮೂಲಗಳು ಹಾಗೂ ಅಂತರ್ಜಲ ಕಲುಷಿತವಾಗುತ್ತಿದೆ. ಹೀಗಾಗಿ, ಸುಲಭ ವಿಧಾನವನ್ನು ಅನುಸರಿಸಬೇಕಾಗುತ್ತದೆ.
ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಅತ್ಯಾಧುನಿಕ ಜಪಾನ ತಂತ್ರಜ್ಞಾನದ ಮೊಬೈಲ್ ಇ.ಟಿ.ಪಿ ಅಳವಡಿಸಲು ಜಲಮಂಡಳಿ ಮುಂದಾಗಿದೆ. ಈ ಮೊಬೈಲ್ ಇ.ಟಿ.ಪಿ ಕೈಗಾರಿಕೆಗಳ ಬಾಗಿಲಿನಲ್ಲಿಯೇ ರಾಸಾಯನಿಕ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಲಿದ್ದು, ಸಂಸ್ಕರಿಸಿದ ನೀರನ್ನು ಮರುಬಳಕೆಗೆ ಕೈಗಾರಿಕೆಗಳಿಗೆ ವಾಪಸ್ ನೀಡಲಿದೆ. ಇದರಿಂದ ಕೈಗಾರಿಕೆಗಳಿಗೆ ನೀರಿನ ವೆಚ್ಚದಲ್ಲಿ ಉಳಿತಾಯವಾಗುತ್ತದೆ. ಉತ್ಪಾದನಾ ವೆಚ್ಚವನ್ನು ಕಡಿತಗೊಳಿಸುವ ಮೂಲಕ ಕಡಿಮೆ ದರದಲ್ಲಿ ಗ್ರಾಹಕರಿಗೆ ಉತ್ಪನ್ನ ನೀಡಬಹುದು. ಅಲ್ಲದೇ, ಪರಿಸರ ಸ್ನೇಹಿ ಉದ್ದಿಮೆಯಾಗಿ ಬೆಳೆಯಲು ಸಹಾಯ ಮಾಡಲಿದೆ.
ಏಪ್ರಿಲ್ 23ಕ್ಕೆ ಮಾಡೆಲ್ ಪ್ರದರ್ಶನ: ಈ ಮಾಡೆಲ್ ಪ್ರದರ್ಶನವನ್ನು ಏ. 23 ರಂದು ಆಯೋಜಿಸಲಾಗುವುದು. ಮೂರು ದಿನಗಳ ಕಾಲ ವಿವಿಧ ಕೈಗಾರಿಕೆಗಳ ಬಾಗಿಲಿಗೆ ತೆರಳಲಿರುವ ಮೊಬೈಲ್ ಇಟಿಪಿ ಕೈಗಾರಿಕೆಗಳಿಗೆ ಆಗುವ ಅನುಕೂಲತೆ ಬಗ್ಗೆ ಪ್ರಾಯೋಗಿಕ ಮಾಹಿತಿ ನೀಡಲಿದೆ. ಈ ಎಲ್ಲ ಕ್ರಮಗಳ ಅಳವಡಿಕೆ ಮೂಲಕ ಜಲಮಾಲಿನ್ಯ ತಡೆಗಟ್ಟಿ ವಿಶ್ವದ ಪ್ರಮುಖ ಪರಿಸರ ಸ್ನೇಹೀ ಕೈಗಾರಿಕಾ ಪ್ರದೇಶ ಮಾಡುವ ಗುರಿ ಜಲಮಂಡಳಿಯದ್ದು.