ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಹಾಸ್ಟೆಲ್‌ನಲ್ಲಿ ಅತ್ಯಾಚಾರ

Share It

ಭೋಪಾಲ್(ಮಧ್ಯಪ್ರದೇಶ): ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಮಧ್ಯಪ್ರದೇಶದಲ್ಲಿ ೮ ವರ್ಷದ ಬಾಲಕಿ ಮೇಲೆ ಹಾಸ್ಟೆಲ್‌ನಲ್ಲಿ ಅತ್ಯಾಚಾರ ನಡೆಸಿರುವ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ.

ಮಧ್ಯಪ್ರದೇಶ ಸರಕಾರ ತನಿಖೆಗಾಗಿ ತಕ್ಷಣವೇ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಇದರ ಬೆನ್ನಲ್ಲೇ ಮೂವರು ಶಂಕಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

“ಪ್ರಕರಣದಲ್ಲಿ ಶಂಕಿತ ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಆರೋಪಿಗಳ ಹೆಸರು ನಮೂದಿಸಿದ್ದರೂ, ಅವರ ಗುರುತು ಪತ್ತೆ ಮಾಡಲಾಗುತ್ತಿದೆ. ಕೃತ್ಯಕ್ಕೂ ಮೊದಲು ಬಾಲಕಿಗೆ ಮಾದಕ ದ್ರವ್ಯ ನೀಡಲಾಗಿತ್ತು ಎಂಬ ಆರೋಪವಿದೆ.

“ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆಕೆಯ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬAಧಿಸಿದ ಸಾಕ್ಷ್ಯಗಳನ್ನು ಸಂಗ್ರಹಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಕ್ಲಿನಿಕಲ್ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ವರದಿ ಬಂದ ಬಳಿಕವೇ ತಿಳಿದುಬರಲಿದೆ.

“ಬಾಲಕಿ ದೇಹದ ಖಾಸಗಿ ಭಾಗದಲ್ಲಿ ಗಾಯಗಳು ಮತ್ತು ಊತ ಕಂಡುಬAದಿದೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ. ಇದೆಲ್ಲವೂ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗೊತ್ತಾಗಲಿದೆ. ಘಟನೆ ಯಾವಾಗ ನಡೆದಿದೆ ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲ.

ಪೊಲೀಸರು ಹಾಸ್ಟೆಲ್‌ನ ಸಿಸಿಟಿವಿಗಳ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಗುರುತು ಪತ್ತೆಯಾದ ನಂತರ ಅವರನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


Share It

You cannot copy content of this page