ಸುದ್ದಿ

ಮಲೆಮಹದೇಶ್ವರ ಬೆಟ್ಟದ ದುರ್ಗಮ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ

Share It

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದ ವ್ಯಾಪ್ತಿಯ ದುರ್ಗಮ ಕಾಡಿನಲ್ಲಿ ಅಸ್ಥಿಪಂಜರವೊAದು ಪತ್ತೆಯಾಗಿದ್ದು, ಪೊಲೀಸರು ಶವದ ಗುರುತು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿ ಪ್ರದೇಶದ ಬೂದುಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಮಲೆಮಹದೇಶ್ವರ ಬೆಟ್ಟದ ಅರಣ್ಯ ಇಲಾಖೆಯ ವಾರ‍್ಸ್ ಪರಿಶೀಲನೆ ನಡೆಸುವ ವೇಳೆ ಅಸ್ಥಿಪಂಜರ ಪತ್ತೆಯಾಗಿದೆ. ಈ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿಯನ್ನು ಹೊರತುಪಡಿಸಿ, ಉಳಿದ ಸಾಮಾನ್ಯರ ಪ್ರವೇಶಕ್ಕೆ ನಿರ್ಬಂಧವಿದೆ.

ಇಷ್ಟಾದರೂ ದುರ್ಗಮ ಕಾಡಿನ ಕಾವೇರಿ ನದಿಯ ತಟದಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು, ಕೊಲೆಯೋ ಆತ್ಮಹತ್ಯೆಯೋ ಎಂಬ ಅನುಮಾನವನ್ನು ಮೂಡಿಸಿದೆ. ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಹಾಗೂ ಸೂಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅಸ್ಥಿಪಂಜರದ ಗುರುತು ಪತ್ತೆಹಚ್ಚಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share It

You cannot copy content of this page