ಉಪಯುಕ್ತ ಸುದ್ದಿ

ಕೊಳವೆಬಾವಿಗೆ ಬಿದ್ದ ಎರಡು ವರ್ಷದ ಮಗು

Share It


ವಿಜಯ ಪುರ: ಜಿಲ್ಲೆಯ ಲಚ್ಯಾಣ ಗ್ರಾಮದಲ್ಲಿ ಎರಡು ವರ್ಷದ ಮಗು ಸಾತ್ವಿಕ್ ಕೊಳವೆ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾಯರ್ಾಚರಣೆ ನಡೆಯುತ್ತಿದೆ.
ಲಚ್ಯಾಣ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕೊಳವೆ ಬಾವಿ ಕೊರೆಸಲಾಗಿತ್ತು. ಅದೇ ಕುಟುಂಬಕ್ಕೆ ಸೇರಿದ ಎರಡು ವರ್ಷದ ಬಾಲಕ ಸಾತ್ವಿಕ್, ಆಟವಾಡುತ್ತ ಇದ್ದ ಸಂದರ್ಭದಲ್ಲಿ ಬಾವಿಗೆ ಬಿದ್ದಿದ್ದಾನೆ. ಸುಮಾರು ಇಪ್ಪತ್ತು ಅಡಿ ಆಳದಲ್ಲಿ ಬಾಲಕ ಸಿಲುಕಿಕೊಂಡಿದ್ದು, ಎಸ್ಡಿಆರ್ಎಫ್ ತಂಡ ರಕ್ಷಣಾ ಕಾಯರ್ಾಚರಣೆ ನಡೆಸುತ್ತಿದೆ.

ಹತ್ತು ಅಡಿ ಆಳದಲ್ಲಿ ಬಂಡೆಯೊಂದು ಕಾಣಿಸಿಕೊಂಡಿದ್ದು, ರಕ್ಷಣಾ ಕಾರ್ಯಕ್ಕೆ ಅಡಚಣೆಯುಂಟಾಗಿದೆ ಎನ್ನಲಾಗಿದೆ. ಬಂಡೆಯನ್ನು ಹೊಡೆಯುವ ಕೆಲಸವನ್ನು ಅಗ್ನಿಶಾಮಕ ಸಿಬ್ಬಂದಿ ಮಾಡುತ್ತಿದ್ದು, ಎಸ್ಡಿಆರ್ಎಫ್ ತಂಡ ಹೆಚ್ಚಿನ ಕಜಾಯರ್ಾಚರಣೆ ನಡೆಸಿ, ಮಗುವನ್ನು ರಕ್ಷಣೆ ಮಾಡುವ ಪ್ರಯತ್ನ ನಡೆಸುತ್ತಿದೆ. ಸ್ಥಳದಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಬೀಡುಬಿಟ್ಟಿದ್ದು, ಮಗುವಿನ ರಕ್ಷಣೆಗೆ ಕಾರ್ಯತಂತ್ರ ರೂಪಿಸಿದ್ದಾರೆ.

ಕೊಳವೆ ಬಾವಿಗೆ ಮಕ್ಕಳು ಬಿದ್ದು, ಸಾವನ್ನಪ್ಪುವ ಘಟನೆಗಳು ಆಗಾಗ ವರದಿಯಾಗುತ್ತಲೇ ಇದ್ದು, ಕೊಳವೆ ಬಾವಿಗಳನ್ನು ಮುಚ್ಚುವಂತೆ ಕಠಿಣ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಆದರೆ, ಕೊಳವೆ ಬಾವಿ ಕೊರೆಸಿದವರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತಹ ಪ್ರಕರಣಗಳು ಆಗಾಗ ಮರುಕಳಿಸುತ್ತಲೇ ಇವೆ. ಮುಂದೆಯಾದರೂ ಇಂತಹ ಘಟನೆಗಳು ನಡೆಯದಂತೆ ಕ್ರಮವಹಿಸಬೇಕು ಎಂಬುದು ಸಾರ್ವಜನಿಕರ ಆಕ್ರೋಶವಾಗಿದೆ.

ಜತೆಗೆ, ಎರಡು ವರ್ಷದ ಮುದ್ದು ಬಾಲಕ ಸಾತ್ವಿಕ್ ಬದುಕಿ ಬರಲಿ ಎಂದು ನಾಡಿನಾದ್ಯಂತ ಪ್ರಾರ್ಥನೆ ಆರಂಭವಾಗಿದೆ. ರಕ್ಷಣಾ ಕಾರ್ಯ ನಡೆಸುತ್ತಿರುವ ಸಿಬ್ಬಂದಿ ಮಗುವಿಗೆ ಉಸಿರಾಟಕ್ಕೆ ಅಗತ್ಯವಾದ ಆಮ್ಲಜನಕವನ್ನು ಪೂರೈಕೆ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ. ಮಗುವಿನ ರಕ್ಷಣೆಯನ್ನು ಮಾಡುವ ನಿಟ್ಟಿನಲ್ಲಿ ಪೊಲೀಸರು, ಜಿಲ್ಲಾಡಳಿತ, ಎಸ್ಡಿಆರ್ಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮಿಸುತ್ತಿದ್ದಾರೆ.


Share It

You cannot copy content of this page