ನಾಸಿಕ್: ದೇಶದಲ್ಲಿ ಹಂದಿ ಜ್ವರದ ಭಿತಿ ಹೆಚ್ಚಾಗುತ್ತಿರುವ ಬೆನ್ನಲ್ಲೇ, ನಾಸಿಕ್ ಜಿಲ್ಲೆಯ ಸಿನ್ನಾರ್ ತಾಲೂಕಿನ ದಾತಾಲಿ ಗ್ರಾಮದಲ್ಲಿ ಹಂದಿ ಜ್ವರದಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಅದೇ ಗ್ರಾಮದಲ್ಲಿ ಹಂದಿ ಜ್ವರದಿಂದಾಗಿ ಮತ್ತೊಬ್ಬ ರೋಗಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಹಂದಿ ಜ್ವರದಿಂದ ಇಬ್ಬರು ರೋಗಿಗಳಿಗೆ ಸೋಂಕು ತಗುಲಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಅಲ್ಲಿನ ಮುನ್ಸಿಪಲ್ ಕಾಪರ್ೊರೇಷನ್, ರೋಗದ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದೆ. ಆರೋಗ್ಯ ಇಲಾಖೆಗೆ ಸನ್ನದ್ಧವಾಗಿರುವಂತೆ ಸೂಚಿಸಿದೆ. ಆರೋಗ್ಯ ಇಲಾಖೆಯೊಂದಿಗೆ ಕೂಡಿಕೊಂಡು ಮುನ್ಸಿಪಲ್ ಕಾಪರ್ೊರೇಷನ್ ಶಂಕಿತ ಹಂದಿ ಜ್ವರದ ರೋಗಿಗಳ ಪತ್ತೆಗೆ ಮುಂದಾಗಿದೆ. ನೆಗಡಿ, ಕೆಮ್ಮು ಮತ್ತು ಜ್ವರದ ಲಕ್ಷಣಗಳಿರುವವರು ಆಸ್ಪತ್ರೆಗಳಲ್ಲಿ ತಕ್ಷಣ ಚಿಕಿತ್ಸೆ ಪಡೆಯುವಂತೆ ಪಾಲಿಕೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ನಾಸಿಕ್ನಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು, ಇಂತಹ ವಾತಾವರಣದಲ್ಲಿ ಹಂದಿ ಜ್ವರದ ಸೋಂಕಿತರು ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಇಬ್ಬರ ಪರೀಕ್ಷಾ ವರದಿಗಳನ್ನು ಹೆಚ್ಚಿನ ತನಿಖೆಗಾಗಿ ಪುಣೆಯಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾಗಿದೆ. ಇಬ್ಬರ ವರದಿಯೂ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ದಿಢೀರ್ ಎಚ್ಚೆತ್ತುಕೊಂಡಿದೆ. ಈ ರೋಗಿಗಳ ಸಂಪರ್ಕಗಳ ಸ್ವ್ಯಾಬ್ಗಳನ್ನು ತೆಗೆದುಕೊಂಡು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಸಿನ್ನಾರ ತಾಲೂಕಿನ ದಟಳ್ಳಿಯ 63 ವರ್ಷದ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ವರದಿ ಕೂಡ ಪಾಸಿಟಿವ್ ಬಂದಿದೆ.
2022ರ ಜನವರಿಯಿಂದ ಡಿಸೆಂಬರ್ನಲ್ಲಿ ನಾಸಿಕ್ ನಗರದಲ್ಲಿ ಹಂದಿ ಜ್ವರ ಕಾಣಿಸಿಕೊಂಡಿತ್ತು. ಆಗ ನಗರದಲ್ಲಿ ಸುಮಾರು 150 ಹಂದಿ ಜ್ವರದ ಸೋಂಕಿತರು ಪತ್ತೆಯಾಗಿದ್ದರು. ಈ ಸಂದರ್ಭದಲ್ಲಿ ಸೋಂಕಿನಿಂದ ಸುಮಾರು 10 ಮಂದಿ ಸಾವನ್ನಪ್ಪಿದ್ದರು. ಒಂದು ವರ್ಷದ ಬಳಿಕ ಇದೀಗ ಹಂದಿಜ್ವರ ಮತ್ತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಅಗತ್ಯಬಿದ್ದರೆ ಸಕರ್ಾರಿ ಆಸ್ಪತ್ರೆಯಲ್ಲಿ ಹಂದಿಜ್ವರ ಸೋಂಕಿತರಿಗಾಗಿ ಪ್ರತ್ಯೇಕ ಕೊಠಡಿ ಆರಂಭಿಸಲು ಅಧಿಕಾರಿಗಳು ಸನ್ನದ್ಧರಾಗಿದ್ದಾರೆ.