ಲಾರಿ ಮತ್ತು ಕಾರಿನ ನಡುವೆ ಅಪಘಾತ: ಚಾಲಕ ಸಾವು, ನಾಲ್ವರ ಸ್ಥೀತಿ ಗಂಭೀರ

Share It

ನೆಲಮಂಗಲ: ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನೆಲಮಂಗಲದ ಬ್ಯಾಡರಹಳ್ಳಿ ಗೇಟ್ ಬಳಿ ನಡೆದಿದೆ.

ಬ್ಯಾಡರಹಳ್ಳಿ ಗೇಟ್ ಬಳಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಚಾಲಕ ಸೈಮನ್ ಸ್ಥಳದಲ್ಲಿಯೇ ಮೃತಪಟ್ಟಿದ್ದು,ಶಕೀಲಾ, ಹ್ಯಾಲಿಸನ್, ಲಿಯೋ, ಇಲಿಯಾಸ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಮುಂದುವರಿದಿದೆ.

ಕಾರಿನಲ್ಲಿ ಕುಟುಂಬ ದಾಬಸ್‌ಪೇಟೆಗೆ ತೆರಳುವಾಗ ಘಟನೆ ನಡೆದಿದ್ದು, ಲಾರಿ ಚಾಲಕನ ನಿರ್ಲಕ್ಷö್ಯದಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


Share It

You May Have Missed

You cannot copy content of this page