ರಾಯಚೂರು: ಬೊಲೆರೋ ವಾಹನ ಹಾಗೂ ಮಹೇಂದ್ರ ಜಿತೋ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸಿಂಧನೂರು ತಾಲೂಕಿನ ಬೂದಿನಾಳ ಕ್ಯಾಂಪ್ ಬಳಿ ಈ ದುರ್ಘಟನೆ ನಡೆದಿದ್ದು, .ಸಿರಗುಪ್ಪ ಹಾಗೂ ಸಿಂಧನೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಈ ಅಪಘಾತದಿಂದ ಸಂಚಾರ ಅಸ್ತವ್ಯಸ್ತವಾಗಿದೆ. ಸಿಂಧನೂರು ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೃತರೆಲ್ಲರೂ ಆಂಧ್ರಪ್ರದೇಶ ಮೂಲದವರಾಗಿದ್ದು, ಕುರಿ ಮಾರಾಟಕ್ಕಾಗಿ ಸಿಂಧನೂರು ಸಂತೆಗೆ ಆಗಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಶವಪರೀಕ್ಷೆಗಾಗಿ ರಾಯಚೂರು ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದು, ಶವಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸುವ ಪ್ರಕ್ರಿಯೆ ಬುಧವಾರ ನಡೆಯಲಿದ.

