ಬೆಂಗಳೂರು: ಗುತ್ತಿಗೆದಾರರಿಂದ ಲಂಚ ಪಡೆಯುವ ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಸೇರಿರುವ ಬಿಜೆಪಿ ಗದಗದ ಶಿರಹಟ್ಟಿಯ ಶಾಸಕ ಡಾ. ಚಂದ್ರು ಲಮಾಣಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯುತ್ತಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಡಾ. ಚಂದ್ರು ಲಮಾಣಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು, ನ್ಯಾಯಾಲಯ ಅರ್ಜಿಯ ವಿಚಾರಣೆ ನಡೆಸಿದೆ. ಚಂದ್ರು ಪರ ಹಿರಿಯ ವಕೀಲರಾದ ಅಶೋಕ್ ಹಾರನಹಳ್ಳಿ ಅವರು ವಾದ ಮಂಡನೆ ಮಾಡಿದ್ದಾರೆ.
ಎಸ್‌ಪಿಪಿ ವಾದಮಂಡನೆಗೆ ಕಾಲಾವಕಾಶ ಕೋರಿಕೆ ಹಿನ್ನೆಲೆಯಲ್ಲಿ ಕಾಲಾವಕಾಶ ನೀಡಿರುವ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ.

