ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳಿಗೆ 20 ವರ್ಷ ಜೈಲು
ಚಾಮರಾಜನಗರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಇಬ್ಬರು ವ್ಯಕ್ತಿಗಳ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಾಮರಾಜನಗರ ಅಧಿಕ ಜಿಲ್ಲಾ ಮತ್ತು ಸತ್ರ ವಿಶೇಷ ಪೊಕ್ಸೋ ನ್ಯಾಯಾಲಯ ಇಬ್ಬರು ಆರೋಪಿಗಳಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.
ವರಸೆಯಲ್ಲಿ ಸ್ವಂತ ತಂಗಿ ಎಂದು ಗೊತ್ತಿದ್ದರೂ, ಓರ್ವ ಅಪರಾಧಿ ಅಪ್ರಾಪ್ತೆಯನ್ನು ಅಪಹರಿಸಿ ಮದುವೆ ಮಾಡಿಕೊಳ್ಳುವೆ ಎಂದು ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಇದಕ್ಕೂ ಮುನ್ನ ಇವರಿಬ್ಬರ ಪ್ರೀತಿ ವಿಚಾರ ತಿಳಿದಿದ್ದ ಇನ್ನೋರ್ವ ವಿವಾಹಿತ ವ್ಯಕ್ತಿ ಬಾಲಕಿಗೆ ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಎಸಗಿದ್ದನು.
ಮೊದಲ ಆರೋಪಿಯಾಗಿದ್ದ ಬಾಲಕಿಯ ಸಂಬಂಧಿಯನ್ನು ಬಂಧಿಸಿದ ಬಳಿಕ ಆಪ್ತ ಸಮಾಲೋಚನೆಯಲ್ಲಿ ನೊಂದ ಬಾಲಕಿ ಬ್ಲಾಕ್ ಮೇಲ್ ವಿಚಾರವನ್ನು ಬಹಿರಂಗಪಡಿಸಿದ್ದಳು. ಇದು ಪೊಲೀಸರ ಗಮನಕ್ಕೆ ಬಂದ ಬಳಿಕ ಅವರು ಆರೋಪ ಪಟ್ಟಿಯನ್ನು ಕೋಟರ್್ಗೆ ಸಲ್ಲಿಸಿದ್ದರು.
ಇವರಿಬ್ಬರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಲೈಂಗಿಕ ದೌರ್ಜನ್ಯ ನಡೆಸಿರುವುದು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ. ಈ ಹಿನ್ನೆಲೆ ಚಾಮರಾಜನಗರ ಅಧಿಕ ಜಿಲ್ಲಾ ಮತ್ತು ಸತ್ರ ವಿಶೇಷ ಪೊಕ್ಸೋ ನ್ಯಾಯಾಧೀಶ ಎನ್ ಆರ್ ಲೋಕಪ್ಪ ಅವರು 20 ವರ್ಷ ಕಠಿಣ ಶಿಕ್ಷೆ, 55 ಸಾವಿರ ರೂ. ದಂಡ ವಿಧಿಸಿದ್ದಾರೆ.
ಸದ್ಯ ಇಬ್ಬರು ಅಪರಾಧಿಗಳಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ, ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 4 ಲಕ್ಷ ರೂ. ಪರಿಹಾರ ಕೊಡುವಂತೆ ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ. ಸಕರ್ಾರದ ಪರ ವಿಶೇಷ ಸಕರ್ಾರಿ ಅಭಿಯೋಜಕ ಕೆ. ಯೋಗೇಶ್ ವಾದ ಮಂಡಿಸಿದ್ದರು