ಬೆಂಗಳೂರು: ಯುಗಾದಿ ಅಂಗವಾಗಿ ತೆಲುಗು ವಿಜ್ಞಾನ ಸಮಿತಿ ವತಿಯಿಂದ ನೀಡಲಾಗುವ 2024 ನೇ ಸಆಲಿನ ಯುಗಾದಿ ವಿಶಿಷ್ಟ ಪುರಸ್ಕಾರಕ್ಕೆ ಹಿರಿಯ ನಟ ಚರಣ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
ಯುಗಾದಿ ಸಾಹಿತ್ಯ ಪುರಸ್ಕಾರಕ್ಕೆ ಸಾಹಿತಿ ಕಮಲಾ ಹಂಪನಾ ಹಾಗೂ ತೆಲುಗು ಕವಯತ್ರಿ ಮೃಣಾಲಿನಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10 ಸಾವಿರು ರು. ನಗದು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ವೈಯ್ಯಾಲಿ ಕಾವಲ್ನಲ್ಲಿರುವ ತೆಲುಗು ವಿಜ್ಞಾನ ಸಮಿತಿಯ ಶ್ರೀ ಕೃಷ್ಣ ದೇವರಾಯ ಕಲಾಮಂದಿರದಲ್ಲಿ ಇದೇ 14 ರಂದು ಯುಗಾದಿ ಉತ್ಸವ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಸಮಾರಂಭದಲ್ಲಿ ಸಾಹಿತಿ ಚಂದ್ರಶೇಖರ ಕಂಬಾರ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಷಿ, ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ತೆಲುಗು ವಿಜ್ಞಾನ ಸಮಿತಿಯ ಅಧ್ಯಕ್ಷ ಎ.ರಾಧಾಕೃಷ್ಣ ರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.