ನವದೆಹಲಿ: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿ ಎಸ್ಐಟಿ ಸಲ್ಲಿಸಿರುವ ಮೇಲ್ಮನವಿ ತೀರ್ಪನ್ನು ಸುಪ್ರೀಂ ಕೋರ್ಟ್ ನಾಳೆ ಪ್ರಕಟ ಮಾಡಲಿದೆ.
ಈಗಾಗಲೇ ಸುಪ್ರೀಂ ಕೋರ್ಟ್ ಜಾಮೀನು ನೀಡಿರುವ ಹೈಕೋರ್ಟ್ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ದರ್ಶನ್ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ ನೀಡುವ ಸಾಧ್ಯತೆ ಹೆಚ್ಚಾಗಿದೆ.
ಇಂದು ಎಸ್ಐಟಿ ಪರ ವಕೀಲರು ವಾದ ಮಂಡಿಸಿದ್ದು, ದರ್ಶನ್ಗೆ ಜಾಮೀನು ನೀಡಿರುವ ಹೈಕೋರ್ಟ್ನ ಲೋಪಗಳ ಬಗ್ಗೆ ಸುಪ್ರೀಂ ಕೋರ್ಟ್ ಗಮನ ಸೆಳೆದರು. ನಾಳೆ ದರ್ಶನ್ ಪರ ವಕೀಲರು ವಾದ ಮಂಡನೆ ಮಾಡಲಿದ್ದು, ಅನಂತರ ತೀರ್ಪು ಪ್ರಕಟವಾಗಲಿದೆ.