ಬೆಂಗಳೂರು: ಕಾಂತಾರ ಖ್ಯಾತಿಯ ನಟ ರಿಷಬ್ ಶೆಟ್ಟಿ ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ಭೇಟಿಯ ಸಂದರ್ಭದಲ್ಲಿ ಕರಾವಳಿಯ ಪ್ರವಾಸೋದ್ಯಮ, ಅಭಿವೃದ್ಧಿ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು ಎಂದು ಹೇಳಲಾಗಿದೆ. ರಿಷಬ್ ಶೆಟ್ಟಿ ಅವರನ್ನು ಕರಾವಳಿ ಪ್ರಾವಾಸೋದ್ಯಮದ ರಾಯಭಾರಿಯನ್ನಾಗಿ ಸರಕಾರ ನೇಮಿಸಿದೆ.
ಕರಾವಳಿ ಪ್ರವಾಸೋದ್ಯಮದ ಕುರಿತ ಸಭೆಯ ನಂತರ ರಿಷಬ್ ಶೆಟ್ಟಿಯವರನ್ನು ನೇಮಿಸಿರುವ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
ರಾಹುಲ್ ಗಾಂಧಿಯನ್ನು ಸಂದರ್ಶನವೊಂದರಲ್ಲಿ ಟೀಕಿಸಿ, ಪ್ರಧಾನಿ ಮೋದಿ ಅವರನ್ನು ಹೊಗಳಿದ್ದ ನಟ ರಿಷಬ್ ಶೆಟ್ಟಿಯನ್ನು ಕಾಂಗ್ರೆಸ್ ಸರಕಾರ ಕರಾವಳಿಯ ರಾಯಭಾರಿಯನ್ನಾಗಿ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿತ್ತು.

