ಪೊಲೀಸರ ಮೇಲೆ ಆಫ್ರಿಕನ್ ಪ್ರಜೆಗಳ ಪುಂಡಾಟ

Share It

ಬೆಂಗಳೂರು: ಆಫ್ರಿಕನ್ ಪ್ರಜೆಗಳ ಪುಂಡಾಟ ನಗರದಲ್ಲಿ ಮತ್ತಷ್ಟು ಹೆಚ್ಚಾಗುತ್ತಿದ್ದು, ಈ ಬಾರಿ ಮಾದಕ ವಸ್ತುಗಳ ಬಳಕೆ ಸಂಬಂಧ ವಿಚಾರಣೆ ಆಗಮಿಸಿದ ಪೊಲೀಸರ ಮೇಲೆಯೇ ದಾಳಿ ನಡೆಸಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರದ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾವಳ್ಳಿಪುರದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಐದಕ್ಕೂ ಹೆಚ್ಚು ಸಿಬ್ಬಂದಿ ಮೇಲೆ ಹಲ್ಲೆ ನಡೆದಿದೆ. ಮಾವಳ್ಳಿಪುರದ ಮನೆಯೊಂದರಲ್ಲಿ ಮಾದಕ ವಸ್ತುಗಳ ಸೇವನೆ, ಸಂಗ್ರಹಣೆಯ ಕುರಿತು ಮಾಹಿತಿ ಕಲೆ ಹಾಕಿದ್ದ ಸಿಸಿಬಿ ಪೊಲೀಸರ ತಂಡ, ತಡರಾತ್ರಿ ಕಾಯರ್ಾಚರಣೆಗೆ ತೆರಳಿತ್ತು. ಈ ವೇಳೆ ತಪ್ಪಿಸಿಕೊಳ್ಳಲು ಮುಂದಾದ ಆರೋಪಿಗಳ ಗುಂಪು ಕಬ್ಬಿಣದ ರಾಡು, ಕಲ್ಲು, ಹೆಲ್ಮೆಟ್ಗಳಿಂದ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದರು.

ತಕ್ಷಣ ಸಿಸಿಬಿ ಪೊಲೀಸ್ ಸಿಬ್ಬಂದಿ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಬಂದ ರಾಜಾನುಕುಂಟೆ ಠಾಣೆಯ ಹೊಯ್ಸಳ ಸಿಬ್ಬಂದಿ ಮೇಲೂ ಆರೋಪಿಗಳು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಸಿಸಿಬಿ ಘಟಕದ ಜೀಪ್ ಮತ್ತು ರಾಜಾನುಕುಂಟೆ ಪೊಲೀಸ್ ಠಾಣೆಯ ಹೊಯ್ಸಳ ಜೀಪಿನ ಗಾಜುಗಳು ಜಖಂಗೊಂಡಿವೆ. ಗಾಯಗೊಂಡ ಪೊಲೀಸರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ವಿಭಾಗದ ಎಸ್.ಪಿ ಮಲ್ಲಿಕಾಜರ್ುನ ಬಾಲದಂಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ಮಾದಕ ಪದಾರ್ಥಗಳಸಹಿತ ಓರ್ವ ವಿದೇಶಿ ಪ್ರಜೆಯನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ಆತನ ಮಾಹಿತಿಯ ಮೇರೆಗೆ ಮತ್ತೋರ್ವ ಮಾದಕ ಸರಬರಾಜುಗಾರನ ಬಂಧನಕ್ಕೆಂದು ಯಲಹಂಕದ ಪ್ರಕೃತಿ ಲೇಔಟ್ ಬಳಿ ತೆರಳಿದ್ದರು. ಆರೋಪಿ ಸಿಗದಿದ್ದಾಗ ಆತ ಇದ್ದ ಸ್ಥಳದ ಮಾಹಿತಿ ಕಲೆಹಾಕಿ ಹಿಂಬಾಲಿಸಿ ವಶಕ್ಕೆ ಪಡೆದುಕೊಳ್ಳಲು ಯತ್ನಿಸಿದರು.

ಈ ಸಂದರ್ಭದಲ್ಲಿ ಜೊತೆಗಿದ್ದ ಮತ್ತೋರ್ವ ಆರೋಪಿ ವಾಟ್ಸ್ಪ್ ಗ್ರೂಪ್ನಲ್ಲಿ ವಾಯ್ಸ್ ಮೆಸೇಜ್ ಕಳಿಸಿ ಇತರೆ ಆರೋಪಿಗಳನ್ನು ಕರೆಸಿಕೊಂಡಿದ್ದಾನೆ. ‘ನಾವು ಸಿಸಿಬಿ ಪೊಲೀಸರು’ ಎಂದು ಹೇಳಿದರೂ ಸಹ ಆರೋಪಿಗಳು ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾರೆ. ತಕ್ಷಣ ಸಿಸಿಬಿ ಸಿಬ್ಬಂದಿ ಪೊಲೀಸ್ ಸಹಾಯವಾಣಿಗೆ ನೀಡಿದ ಮಾಹಿತಿಯನ್ವಯ ರಾಜಾನುಕುಂಟೆ ಠಾಣಾ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ.

ಘಟನೆಯಲ್ಲಿ ಸಿಸಿಬಿ ಸಿಬ್ಬಂದಿ, ರಾಜಾನುಕುಂಟೆ ಠಾಣಾ ಸಿಬ್ಬಂದಿ ಸಹಿತ ನಾಲ್ವರಿಗೆ ಗಾಯಗಳಾಗಿವೆ. ಸಿಸಿಬಿ ಇನ್ಸ್ಪೆಕ್ಟರ್ ಸುಬ್ರಹ್ಮಣ್ಯ ಸ್ವಾಮಿ ನೀಡಿರುವ ದೂರಿನನ್ವಯ ರಾಜಾನುಕುಂಟೆ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳು ವಾಸವಿದ್ದ ಮನೆಯನ್ನು ಉತ್ತರ ಭಾರತ ಮೂಲದ ಮಹೇಶ್ ಗುಪ್ತಾ ಎಂಬಾತ ಮನೆ ಬಾಡಿಗೆಗೆ ನೀಡಿದ್ದ. ಆತ ಬಿಹಾರದಲ್ಲಿದ್ದು, ಆತನನ್ನೂ ಸಹ ಸಂಪಕರ್ಿಸಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದೇವೆ.

ಆರೋಪಿಗಳ ಬಂಧನದ ಬಳಿಕ ಅವರು ಯಾವ ವೀಸಾದಡಿ ಭಾರತಕ್ಕೆ ಬಂದಿದ್ದರು? ಅವಧಿ ಅಂತ್ಯವಾದ ಬಳಿಕವೂ ವಾಸವಿದ್ದರಾ? ವಿದೇಶಿಯರ ಪ್ರಾದೇಶಿಕ ನೋಂದಣಿ ಕೇಂದ್ರದಲ್ಲಿ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿವುದು. ಹೆಚ್ಚಿನ ಸಿಬ್ಬಂದಿಯೊಂದಿಗೆ ತೆರಳಿ ಆರೋಪಿಗಳ ಹುಡುಕಾಟ ನಡೆಸಲಾಗುತ್ತಿದೆ ಎಂದು ಮಲ್ಲಿಕಾಜರ್ುನ ಬಾಲದಂಡಿ ಮಾಹಿತಿ ನೀಡಿದರು


Share It

You May Have Missed

You cannot copy content of this page