ತುಮಕೂರು : ಬೆಳೆ ವಿಮೆ, ಬೆಳೆ ಸಮೀಕ್ಷೆ, ಪ್ರಧಾನ ಮಂತ್ರಿ ಕಿಸಾನ್ ಯೋಜನೆ, ಬೆಳೆ ವಿಮಾ ಪರಿಹಾರ ಸೇರಿದಂತೆ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿ ಕೇಂದ್ರಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ ನೀಡಿದರು.
ರೈತರು ಕೃಷಿ ಸಂಬಂಧಿತ ಕಾರ್ಯಕ್ರಮ/ ಯೋಜನೆಗಳ ಮಾಹಿತಿಯನ್ನು ಸಹಾಯವಾಣಿ ಸಂಖ್ಯೆ: ೮೮೮೪೦೦೬೩೦೬, ೮೮೮೪೦೦೬೩೦೮, ೦೮೧೬-೨೨೭೮೪೭೪ಕ್ಕೆ ಕರೆ ಮಾಡಿ ಪಡೆಯಬಹುದಾಗಿದೆ. ಸಹಾಯವಾಣಿಯು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ಉಪ ನಿರ್ದೇಶಕ ಆಶೋಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

