ಶಿರೂರು, ವಯನಾಡು ಭೂಕುಸಿತ ರಾಜ್ಯಕ್ಕೆ ಎಚ್ಚರಿಕೆಯ ಘಂಟೆ: ಸಚಿವ ಈಶ್ವರ್ ಖಂಡ್ರೆ
ಪ್ರಕೃತಿ ವಿಕೋಪದಿಂದ ಇವತ್ತು ಸಂಭವಿಸುತ್ತಿರುವ ಘಟನೆಗಳು ತುಂಬ ಆಘಾತಕಾರಿಯಾಗಿದ್ದು, ರಾಜ್ಯದಲ್ಲಿ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದೇನೆ ಎಂದು ತೀಳಿಸಿದರು. ಶಿರೂರು, ವಯನಾಡು ಭೂಕುಸಿತ ರಾಜ್ಯಕ್ಕೆ ಎಚ್ಚರಿಕೆಯ ಘಂಟೆ ಆಗಿದ್ದು ಪಶ್ಚಿಮ ಘಟ್ಟದ ಉಳಿವಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ರಾಜ್ಯದ ಪಶ್ಚಿಮ ಘಟ್ಟದಲ್ಲಿ 2015 ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಮಲೆನಾಡು ಪ್ರದೇಶಗಳ ಜನರ ರಕ್ಷಣೆ ಮತ್ತು ಹಾನಿಗೊಳಗಾದ ಸಂತ್ರಸ್ತರಿಗೆ ತ್ವರಿತಗತಿಯಲ್ಲಿ ಪರಹಾರ ನೀಡುತ್ತೇವೆ. ಕೇರಳದಲ್ಲಿ ಸಂಭವಿಸಿರುವ ಭೂಕುಸಿತದ ದುರಂತಕ್ಕೆ ಎಲ್ಲ ರೀತಿಯಿಂದಲೂ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ತಿಳಿಸಿದರು.


