ರಾಜಕೀಯ ಸುದ್ದಿ

ಕರ್ನಾಟಕದಲ್ಲಿ ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ, ಪ್ರಧಾನಿಯವರಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ: ಡಿಸಿಎಂ ಡಿಕೆಶಿ

Share It

ಲಿಂಗಸಗೂರು: “ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ. ಪ್ರಧಾನಿಯವರ ಕಣ್ಣಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು‌.

ರಾಯಚೂರಿನ ಲಿಂಗಸಗೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಕರ್ನಾಟಕದಲ್ಲಿ ಸಿಎಂ ಕುರ್ಚಿ ಅಲುಗಾಡುತ್ತಿದೆ. ಕೇರಳ, ಪಂಜಾಬ್ ನಲ್ಲೂ ಇದೇ ರೀತಿ ಆಗಿದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ಈ ರೀತಿ ಉತ್ತರಿಸಿದರು.

ಸಮಸ್ಯೆ ಪರಿಹಾರಕ್ಕೆ ಕ್ರಮ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸದನದಲ್ಲಿ ಚರ್ಚೆಯಾಗಿರುವ ಕುರಿತು ಕೇಳಿದಾಗ, “ನನಗೆ ಇದರ ಬಗ್ಗೆ ಗೊತ್ತಿಲ್ಲ. ನನ್ನ ಇಲಾಖೆಯಿಂದ ಕುಡಿಯುವ ನೀರು ನೀಡಲು ಆದ್ಯತೆಯಿದೆ. ಈ ಬಗ್ಗೆ ನಮ್ಮ ಅಧಿಕಾರಿಗಳ ಬಳಿ ಮಾತನಾಡಿ ಏನು ಪರಿಹಾರ ಮಾಡಬೇಕೋ ಮಾಡುತ್ತೇನೆ” ಎಂದು ಹೇಳಿದರು‌.


Share It

You cannot copy content of this page