ಅಪರಾಧ ಸಿನಿಮಾ ಸುದ್ದಿ

ಸಾಕ್ಷಿಗಳಿಗೆ ಬೆದರಿಕೆ ಆರೋಪ: ದರ್ಶನ್ ಬೆಂಬಲಿಗರ ವಿರುದ್ಧ ದೂರು

Share It

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಸಾಕ್ಷಿಗಳಾಗಿರವರನ್ನು ದರ್ಶನ್ ಸಹಚರರು ಬೆದರಿಸಿದ್ದಾರೆ ಎಂಬ ಆರೋಪ ಇದೀಗ ಕೇಳಿಬಂದಿದ್ದು, ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದ ದಿನದಿಂದಲೂ ಪ್ರಕರಣ ಮುಚ್ಚಿಹಾಕಲು ದರ್ಶನ್ ಮತ್ತು ಸಹಚರರು ಪ್ರಯತ್ನ ನಡೆಸುತ್ತಲೇ ಇದ್ದರು. ಇದೀಗ ದರ್ಶನ್ ಮತ್ತು ಸಹಚರರು ಪೊಲೀಸ್ ಕಸ್ಟಡಿಯಲ್ಲಿದ್ದು, ಇನ್ನುಳಿದ ಕೆಲವರು ಸಾಕ್ಷಿಗಳಿಗೆ ಬದರಿಕೆ ಹಾಕುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ಹೀಗಾಗಿ, ದರ್ಶನ್ ಮತ್ತು ಬೆಂಬಲಿಗರ ವಿರುದ್ಧ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ಅಂಶವನ್ನು ಪೊಲೀಸರು ನ್ಯಾಯಾಲಯಕ್ಕೆ ಒದಗಿಸಿದ್ದು, ಪ್ರಕರಣದಲ್ಲಿ ನಡೆಯುತ್ತಿರುವ ಸಾಕ್ಷಿನಾಶ ಪ್ರಕ್ರಿಯೆಯನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.


Share It

You cannot copy content of this page