ಉಪಯುಕ್ತ ರಾಜಕೀಯ ಸುದ್ದಿ

ಟ್ರಸ್ಟ್ ಹೆಸರಲ್ಲಿ ಭೂಕಬಳಿಕೆ ಆರೋಪ: ಸರಕಾರಕ್ಕೆ ಹೈಕೋರ್ಟ್ ನೊಟೀಸ್

Share It

ಆನೇಕಲ್: ಉದ್ದೇಶದ ಬಳಕೆಗೆ ಮೀಸಲಿಟ್ಟಿದ್ದ ಎರಡು ಎಕರೆ ಜಾಗವನ್ನು ಸೂರ್ಯೋದಯ ಎಜುಕೇಷನಲ್ ಟ್ರಸ್ಟ್ ಒತ್ತುವರಿ ಮಾಡಿ ಶಾಲೆ ನಿರ್ಮಾಣ ಮಾಡಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬAಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತಂತೆ ಸ್ಥಳೀಯ ಟಿ.ಎನ್.ಸಂಪAಗಿ ರಾಮ ರೆಡ್ಡಿ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ಕೈಗೊಂಡಿತು.
ಅರ್ಜಿದಾರ ಪರ ವಕೀಲರ ವಾದ ಆಲಿಸಿದ ಬಳಿಕ ಪ್ರತಿವಾದಿಗಳಾದ ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಆನೇಕಲ್ ತಹಸೀಲ್ದಾರ್ ಮತ್ತು ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಎನ್ನಲಾದ ತಿರುಪಾಳ್ಯ ನಿವಾಸಿ ಟಿ.ಕೃಷ್ಣ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ತಿರುಪಾಳ್ಯ ಗ್ರಾಮದ ಸರ್ವೇ ನಂ ೨/೧೫ರಲ್ಲಿನ ಒಟ್ಟು ೮ ಎಕರೆ ೧೨ ಗುಂಟೆ ಜಮೀನನ್ನು ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ರಸ್ತೆ ಮತ್ತು ಮತ್ತು ಕೆಪಿಟಿಸಿಎಲ್‌ಗಾಗಿ ಸರ್ಕಾರ ಮೀಸಲಿಟ್ಟಿತ್ತು. ಅದರಲ್ಲಿ ಎರಡು ಎಕರೆ ಜಮೀನನ್ನು ಟಿ.ಕೃಷ್ಣ ಅವರು ಒತ್ತುವರಿ ಮಾಡಿದ್ದಾರೆ. ಸೂರ್ಯೋದಯ ಎಜುಕೇಷನ್ ಟ್ರಸ್ಟ್ ಹೆಸರಿನಡಿಯಲ್ಲಿ ಶಾಲಾ ಹಾಗೂ ದೇವಸ್ಥಾನ ಕಟ್ಟಡ ನಿರ್ಮಿಸಿ, ವಾಣಿಜ್ಯ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಸರ್ಕಾರಿ ಜಮೀನು ಒತ್ತುವರಿ ಕುರಿತು ಸಂಬAಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರೂ ಈ ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಟಿ.ಕೃಷ್ಣ ಅವರಿಂದ ನಡೆದಿರುವ ಒತ್ತುವರಿ ತೆರವುಗೊಳಿಸಬೇಕು. ಒತ್ತುವರಿಯಾಗಿರುವ ಜಾಗದಲ್ಲಿ ಸೂರ್ಯೋದಯ ಎಜುಕೇಷನಲ್ ಟ್ರಸ್ಟ್ ವತಿಯಿಂದ ಶಾಲೆ ಮುಂದುವರಿಸದAತೆ ಹಾಗೂ ಮುಂದಿನ ಯಾವುದೇ ನಿರ್ಮಾಣ ಕಾಮಗಾರಿಗಳಿಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಲಾಗಿತ್ತು.


Share It

You cannot copy content of this page