ರಾಜಕೀಯ ಸುದ್ದಿ

ಭಾರತ ಅಮೇರಿಕಾ ಸಂಬಂಧ ವೃದ್ದಿಯಲ್ಲಿ ಐತಿಹಾಸಿಕ ಹೆಜ್ಜೆ: ಬಸವರಾಜ ಬೊಮ್ಮಾಯಿ

Share It

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೇರಿಕಾ ಅಧ್ಯಕ್ಷ್ಯ ಡೋನಾಲ್ಡ್ ಟ್ರಂಪ್ ನಡುವೆ ನಡೆದ ಎರಡು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ದಿಗೆ ಮಹತ್ವದ ಮೈಲುಗಲ್ಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು ವಿಶ್ವ ಮಟ್ಟದಲ್ಲಿ ಭಾರತದ ಅಭಿವೃದ್ದಿಗೆ ಪೂರಕವಾಗಿ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಪ್ರಧಾನಿಯವರು ಯಶಸ್ವಿಯಾಗಿದ್ದಾರೆ. ಈ ಮಹತ್ವದ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವವರ ನಾಯಕತ್ವಕ್ಕೆ ಮತ್ತು ಅವರ ತಂಡಕ್ಕೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಎರಡು ರಾಷ್ಟ್ರಗಳ ನಡುವಿನ ಈ ಒಪ್ಪಂದ ರೈತರು, ಸಣ್ಣ ಕೈಗಾರಿಕೆಗಳು, ನವೋದ್ಯಮಿಗಳಿಗೆ, ಕೌಶಲ್ಯ ಹೊಂದಿರುವ ಕಾರ್ಮಿಕರಿಗೆ ವಿಶ್ವ ಮಟ್ಟದಲ್ಲಿ ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಲು ಹೊಸ ಅವಕಾಶಗಳನ್ನು ಒದಗಿಸಲಿದೆ ಎಂದು ತಿಳಿಸಿದ್ದಾರೆ.


Share It

You cannot copy content of this page