ಅಪರಾಧ ಸುದ್ದಿ

ಕಬ್ಬಿಣದ ಪ್ಲೇಟ್ ಬಿದ್ದು ಕಾರ್ಮಿಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

Share It

ನೆಲಮಂಗಲ: ಕಬ್ಬಿಣದ ಬೃಹದಾಕಾರದ ಪ್ಲೇಟ್‌ವೊಂದು ಬಿದ್ದು, ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ಸಮೀಪದ ದಾಬಸ್‌ಪೇಟೆಯಲ್ಲಿ ನಡೆದಿದೆ.

ದಾಬಸ್‌ಪೇಟೆಯ ಕೈಗಾರಿಕಾ ಪ್ರದೇಶದಲ್ಲಿರುವ ಮಾರುತಿ ಪ್ಯಾಬ್ ಟೆಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಾರ್ಮಿಕರು ಕಬ್ಬಿಣದ ಪ್ಲೇಟ್‌ಗಳನ್ನು ಜೋಡಿಸುವಾಗ ಅದು ಜಾರಿ ಕಾರ್ಮಿಕರ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಒಬ್ಬ ಕಾರ್ಮಿಕ ವಗಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮತ್ತೊಬ್ಬ ಕಾರ್ಮಿಕ ಅಹಬ್ ಅಯಾಬ್ ಎಂಬಾತನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಆತನನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಕಾರ್ಖಾನೆಯ ವಿರುದ್ಧ ಕ್ರಮಕ್ಕೆ ಪೊಲೀಸರು ಚಿಂತನೆ ನಡೆಸಿದ್ದಾರೆ.


Share It

You cannot copy content of this page