ಬೆಳಗಾವಿ: ಮನೆಯಲ್ಲಿ ಮಡದಿ ಸೀರೆ ಬದಲು ನೈಟಿ ಹಾಕಿಕೊಂಡಿದ್ದಕ್ಕೆ ಕೋಪಗೊಂಡ ಪತಿಯೊಬ್ಬ ಪತ್ನಿಯನ್ನು ಜೀವಂತವಾಗಿಯೇ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದ ಮಂಜುಳಾ ಅವರನ್ನು ಪತಿ ಕೃಷ್ಣಾಜಿ ಪಾಟೀಲ್ ಬೆಂಕಿಹಚ್ಚಿ ಸುಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಂಜುಳಾ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಗೋವಾಗೆ ಕುಟುಂಬಸ್ಥರು ಶಿಫ್ಟ್ ಮಾಡಿದ್ದಾರೆ.
ನಂದಗಡ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತಲೆ ಮರೆಸಿಕೊಂಡಿರುವ ಆರೋಪಿ ಕೃಷ್ಣಾಜಿ ಪಾಟೀಲ್ ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

