ಸುದ್ದಿ

ಅಂಕೋಲಾ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ಕುಸಿದ ಗುಡ್ಡ, ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

Share It

ಅಂಕೋಲಾ: ಸೋಮವಾರ ರಾತ್ರಿ ಸತತವಾಗಿ ಸುರಿದ ನಿರಂತರ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಬಿದ್ದಿದ್ದು ಹೆದ್ದಾರಿ ಪಕ್ಕದ ಅಂಗಡಿ ಮನೆಗಳಲ್ಲಿ ರುವ ಸುಮಾರು 6-7 ಜನರು ಮಣ್ಣಿನ ಅಡಿ ಸಿಲುಕಿದ ಶಂಕೆ ವ್ಯಕ್ತವಾಗಿದೆ.

ರಾಷ್ಟ್ರೀಯ ಹೆದ್ದಾರಿ 66 ಅಂಕೋಲಾ- ಕುಮಟಾ ಮಾರ್ಗದಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದು ಬಿದ್ದಿದೆ. ಲಾರಿ ಸೇರಿದಂತೆ ಕೆಲವು ವಾಹನಗಳು ಮಣ್ಣಿನ ಅಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಗುಡ್ಡದ ಮಣ್ಣಿನ ಜೊತೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿದ ಟ್ಯಾಂಕರ್ ಪಕ್ಕದಲ್ಲಿ ಹರಿಯುತ್ತಿರುವ ಗಂಗಾವಳಿ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದು ಇದೇ ವೇಳೆ ಹೆದ್ದಾರಿಯಲ್ಲಿ ನಿಲ್ಲಿಸಿಟ್ಟ ಟ್ಯಾಂಕ‌ರ್ ಸಹ ಮಣ್ಣಿನ ರಭಸಕ್ಕೆ ಗಂಗಾವಳಿ ನದಿಯಲ್ಲಿ ಕೊಚ್ಚಿಹೋಗಿದ್ದು, ಅದರಲ್ಲಿದ್ದ ಚಾಲಕ ಹಾಗೂ ಕ್ನೀನರ್‌ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.

ಭಾರಿ ಪ್ರಮಾಣದ ಮಣ್ಣು ನದಿಗೆ ಬಿದ್ದು ನೀರು ಸಾರಾಗವಾಗಿ ಹರಿಯಲು ತೊಂದರೆ ಆಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು ವಾಹನಗಳು ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತಿವೆ.

ಅಂಕೋಲಾ ಪೊಲೀಸರು, ಅಗ್ನಿಶಾಮಕ, ರಾಷ್ಟ್ರೀಯ ಹೆದ್ದಾರಿ ಸಿಬ್ಬಂದಿಗಳು ಸ್ಥಳಕ್ಕೆ ದಾವಿಸಿದ್ದು ಮಣ್ಣು ತೆರುವು ಕಾರ್ಯಾಚರಣೆ ನಡೆಯುತ್ತಿದೆ.
ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಹೆದ್ದಾರಿ ಅಗಲೀಕರಣಕ್ಕಾಗಿ ರಸ್ತೆ ಪಕ್ಕದ ಗುಡ್ಡ ಅಗೆಯಲಾಗಿತ್ತು. ಈಗ ಭಾರಿ ಮಳೆಯ ಕಾರಣದಿಂದ ಗುಡ್ಡ ಕುಸಿತ ಉಂಟಾಗಿದೆ.

ಅದರಂತೆ ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನಿರಾಕಾರ ದೇವಾಲುದ ಬಳಿ ಸಹ ಗುಡ್ಡ ಕುಸಿತವಾಗಿದ್ದು ಪಕ್ಕದಲ್ಲೆ ಇದ್ದ ಹಂಚಿನ ಮನೆಗೆ ಸಂಪೂರ್ಣ ಹಾನಿಯಾಗಿದೆ. ಮನೆಯವರು ಇಲ್ಲಿ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ


Share It

You cannot copy content of this page