ಧಾರವಾಡ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ಮದನ್, ಸುರೇಶ್ ಮತ್ತು ಎಲ್.ಎನ್.ವೇಣುಗೋಪಾಲ್ ಎಂಬವರು ಮೃತಪಟ್ಟಿದ್ದಾರೆ. ತೋಟ ನೋಡಿಕೊಂಡು ಮುಂಡರಗಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.
ಮೃತರು ಮೈಸೂರು ಹಾಗೂ ಬೆಂಗಳೂರಿನವರು ಎಂದು ತಿಳಿದು ಬಂದಿದೆ. ಅಣ್ಣಿಗೇರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.