ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಕೆಟ್ಟ ಕಮೆಂಟ್ ಹಾಕಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ ೫ಕ್ಕೇರಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ಧರಿಯಪ್ಪ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ದಾವಣಗೆರೆ ಹಾಗೂ ಬೆಂಗಳೂರಿನಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಅವರೆಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಲು ಸಿಸಿಬಿ ಪೊಲೀಸರು ಪ್ರತ್ಯೇಕ ತಂಡಗಳನ್ನು ರಚಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿನ ಕಮೆಂಟ್ ಮತ್ತು ಅಕೌಂಟ್ಗಳ ಆಧಾರದ ಮೇಲೆ ಪತ್ತೆಗೆ ಇಳಿದಿತ್ತು. ಇದರ ಭಾಗವಾಗಿ ಬಾಗಲಕೋಟೆಯಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.

