ಚಿಕ್ಕಬಳ್ಳಾಪುರ: ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ.
ಚಿಕ್ಕಬಳ್ಳಾಪುರದ ಜಿಲ್ಲಾ ಅಪರ ನ್ಯಾಯಾಲಯದಲ್ಲಿ ರಾಜೀವ್ ಗೌಡ ಅವರಿಗೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ರಾಜೀವ್ ಗೌಡ ಪರ ವಕೀಲ ಶಿವಶಂಕರ ರೆಡ್ಡಿ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿದ್ದು, ಜಾಮೀನು ನೀಡಲು ನಿರಾಕರಿಸಿದೆ.
ಜಾಮೀನು ನಿರಾಕರಣೆ ಬೆನ್ನಲ್ಲೇ ರಾಜೀವ್ ಗೌಡ ಪೊಲೀಸರ ಮುಂದೆ ಶರಣಾಗಬೇಕಾದ ಅನಿವಾರ್ಯತೆ ಎದುರಾಗಿದೆ. ಪುರಸಭೆಯ ಮಹಿಳಾ ಅಧಿಕಾರಿ ಅಮೃತಾ ಗೌಡ ಅವರನ್ನು ಅವಾಚ್ಯವಾಗಿ ನಿಂದಿಸಿ, ಧಮ್ಕಿ ಹಾಕಿದ ಪ್ರಕರಣದಲ್ಲಿ ಪೊಲೀಸರು, ರಾಜೀವ್ ಗೌಡ ಅವರನ್ನು ಹುಡುಕುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜೀವ್ ಗೌಡ ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ್ದು, ಇದೀಗ ಪೊಲೀಸರು, ಅವರನ್ನು ಬಂಧಿಸುವ ಸಾಧ್ಯತೆಯಿದೆ.

