ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮನವಿ: ಸಂಸದ ಬಿ.ವೈ.ರಾಘವೇಂದ್ರ

Share It

ಕುಂದಾಪುರ: ಸಂಸದ ಬಿ.ವೈ. ರಾಘವೇಂದ್ರ ಅವರು ದೆಹಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಬುಧವಾರ ಭೇಟಿ ಮಾಡಿ, ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಮನವಿ ಮಾಡಿದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉದ್ಯಮಿ ವೆಂಕಟೇಶ್ ಕಿಣಿ ಅವರೊಂದಿಗೆ ಸಚಿವರನ್ನು ಭೇಟಿ ಮಾಡಿದ್ದ ಸಂಸದರು, ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನ ದಕ್ಷಿಣ ಭಾರತದ ಪ್ರಸಿದ್ದ ಧಾರ್ಮಿಕ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ. ಪ್ರತಿದಿನ 10 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಆದ್ದರಿಂದ ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣಕ್ಕೆ ಸಮೀಪವಿರುವ ಒತ್ತಿನೆಣೆಯಲ್ಲಿ 500 ಎಕರೆಗೂ ಅಧಿಕ ಸ್ಥಳ ಲಭ್ಯವಿದ್ದು, ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಸಂಸದ ಬಿ.ವೈ.ರಾಘವೇಂದ್ರ ಅವರು, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಮನವಿ ಸಲ್ಲಿಸಿದರು.

ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುತ್ತದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳ ಲಭ್ಯವಿದ್ದು ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತಾದಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಆದ್ದರಿಂದ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡುವಂತೆ ಸಚಿವರಲ್ಲಿ ಸಂಸದರು ಮನವಿ ಮಾಡಿದರು.

ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದರ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Share It

You May Have Missed

You cannot copy content of this page