ಉಪಯುಕ್ತ ಸುದ್ದಿ

ಬಿಐಇಆರ್‌ಟಿ ಹುದ್ದೆಗೆ ವಿಶೇಷ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

Share It

ಶಿವಮೊಗ್ಗ : ಶಾಲಾ ಶಿಕ್ಷಣ ಇಲಾಖೆಯು ಸಮಗ್ರ ಶಿಕ್ಷಣ ಕರ್ನಾಟಕ ಶಿವಮೊಗ್ಗ ಜಿಲ್ಲೆಯ 7 ತಾಲೂಕುಗಳಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆಯಡಿಯಲ್ಲಿ ಖಾಲಿ ಇರುವ ಬಿಐಇಆರ್‌ಟಿ (ಪ್ರಾಥಮಿಕ ಮತ್ತು ಪ್ರೌಢ) ಹುದ್ದೆಗಳಿಗೆ ನೇರ ಗುತ್ತಿಗೆಯಡಿ ನೇಮಕ ಮಾಡಿಕೊಳ್ಳುತ್ತಿದ್ದು, ಬಿ.ಇಡಿ ಅಥವಾ ಡಿ.ಇಐ.ಇಡಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಶಿಕ್ಷಣ ಕರ್ನಾಟಕ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜೂನ್ 14 ರೊಳಗಾಗಿ ಸಲ್ಲಿಸುವಂತೆ ಹಾಗೂ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Share It

You cannot copy content of this page