ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ: 71 ರಿಟ್ ಅರ್ಜಿಗಳು ವಜಾ
ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವ ಸಂಬAಧ ಸಲ್ಲಿಕೆಯಾಗಿದ್ದ ೭೧ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ನಗರಸಭೆ, ಪುರಸಭೆ ಸದಸ್ಯರ ಅವಧಿ ಮುಗಿದಿದ್ದು, ಅವರ ಅವಧಿಯನ್ನು ಮುಂದುವರಿಸಲು ಸಾಧ್ಯವಿಲ್ಲ. ಹೀಗಾಗಿ, ಆಡಳಿತಾಧಿಕಾರಿ ನೇಮಕ ಮಾಡಬೇಕು ಎಂದು ಸರಕಾರ ತೀರ್ಮಾನಿಸಿದೆ. ಇದಕ್ಕೆ ತಡೆ ನೀಡುವಂತೆ ಕೋರಿ ೭೧ ಅರ್ಜಿಗಳು ಸಲ್ಲಿಕೆಯಾಗಿದ್ದವು.
ಸರಕಾರದ ಪರ ವಾದ ಮಂಡಿಸಿದ ಎಜಿ ಪ್ರತಿಮಾ ಹೊನ್ನಾಪುರ ಅವರು, ವಾರ್ಡ್ಗಳ ಪುನರ್ ವಿಂಗಡಣೆಗೆ ಕಾಲಾವಕಾಶ ಬೇಕಾಗಿದ್ದು, ಈ ವೇಳೆ ಜನಪ್ರತಿನಿಧಿಗಳನ್ನು ಮುಂದುವರಿಸಲು ಸಾಧ್ಯವಿಲ್ಲ. ಹೀಗಾಗಿ, ಆಡಳಿತಾಧಿಕಾರಿಗಳ ನೇಮಕ ಮಾಡುವುದು ಅನಿವಾರ್ಯ ಎಂದು ಅವರು ವಾದಿಸಿದ್ದರು.
ಆಡಳಿತಾಧಿಕಾರಿಗಳ ನೇಮಕಕ್ಕೆ ಸಂಬAಧಿಸಿದAತೆ ಮಧ್ಯಪ್ರವೇಶಕ್ಕೆ ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ. ಸಲ್ಲಿಕೆಯಾಗಿದ್ದ ೭೧ ಅರ್ಜಿಗಳನ್ನು ವಜಾಗೊಳಿಸಿದೆ.


