ಅಪರಾಧ ಉಪಯುಕ್ತ ರಾಜಕೀಯ ಸುದ್ದಿ

ಎಸ್ಐಟಿ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

Share It

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.


Share It

You cannot copy content of this page