ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಮಾಡಿದ್ದ ಆರೋಪ ಸಂಬAಧ ನ್ಯಾಯಾಂಗ ಬಂಧನದಲ್ಲಿರುವ ನಟಿ ಹರ್ಷವರ್ದಿನಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ರನ್ಯಾ ರಾವ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ ಅರ್ಜಿಗೆ ಸಂಬAಧಿಸಿದAತೆ ಆಕ್ಷೇಪಣೆ ಸಲ್ಲಿಸಲು ಕಂದಾಯ ಗುಪ್ತಚರ ನಿರ್ದೇಶನಾಲಯಕ್ಕೆ (ಡಿಆರ್‌ಐ) ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಿದೆ.
ಚಿನ್ನ ಕಳ್ಳಸಾಗಣೆ ಆರೋಪ ಪ್ರಕರಣದಲ್ಲಿ ಮಾರ್ಚ್ ೩ರಂದು ರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ಅವರನ್ನು ಬಂಧಿಸಿ, 14 ಕೆ.ಜಿ. ಚಿನ್ನವನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದರು.