ದೆಹಲಿಯ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆ ಅಂತ್ಯವಾಗಿ ತೀರ್ಪನ್ನು ಕಾಯ್ದಿರಿಸಿದ್ದ ತೀರ್ಪನ್ನು ನಾಳೆ ಮಂಗಳವಾರ ದೆಹಲಿ ಹೈಕೋರ್ಟ್ ನೀಡಲಿದೆ.
ಸದ್ಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ಕೆಳಹಂತದ ನ್ಯಾಯಾಲಯದಿಂದ ಕೇಜ್ರಿವಾಲ್ ಅವರು ಜಾಮೀನು ಪಡೆದಿದ್ದಾರೆ. ಆದರೆ ಈ ಜಾಮೀನು ಆದೇಶ ಪ್ರಶ್ನಿಸಿ ಇಡಿ ದೆಹಲಿ ಹೈಕೋರ್ಟ್ ಗೆ ಕೇಜ್ರಿವಾಲ್ ಅವರಿಗೆ ನೀಡಿರುವ ಜಾಮೀನು ರದ್ದುಗೊಳಿಸಬೇಕೆಂದು ಮೇಲ್ಮನವಿ ಸಲ್ಲಿಸಿತ್ತು.
ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ದೆಹಲಿ ಹೈಕೋರ್ಟ್ ನಾಳೆ ಮಂಗಳವಾರ ನೀಡಲಿದೆ. ಹೀಗಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನಾಳೆ ಬೇಲಾ? ಇಲ್ಲವೇ ಜೈಲಾ? ಎಂಬ ರಾಜಕೀಯ ಕುತೂಹಲ ಸೃಷ್ಟಿಯಾಗಿದೆ.

