ಅಪರಾಧ ಸಿನಿಮಾ ಸುದ್ದಿ

RCB ಸೋಲಿಗೆ ಅಶ್ವಿನಿ ಕಾರಣ:ದೂರು ದಾಖಲು

Share It


ಬೆಂಗಳೂರು: ಆರ್ಸಿಬಿ ಸತತವಾಗಿ ಸೋಲು ಅಶ್ವಿನಿ ಪುನೀತ್ ರಾಜಕುಮಾರ್ ಅವರೇ ಕಾರಣ ಎಂಬರ್ಥದಲ್ಲಿ ಪೋಸ್ಟ್ ಮಾಡಿದ್ದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕೈಗೊಳ್ಳುವಂತೆ ಆಗ್ರಹಿಸಿ ದೂರು ದಾಖಲಿಸಲಾಗಿದೆ.

ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಕಿಡಿಗೇಡಿಗಳು ಚಿತ್ರ ನಿಮರ್ಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್?ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಇಂದು ಅಪ್ಪು ಅಭಿಮಾನಿಗಳು ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದರು.

ಮಾಚರ್್ 19 ರಂದು ರಾಯಲ್ ಚಾಲೆಂಜಸರ್್ ಬ್ಯಾಂಗಲೋರ್ ಎಂದಿದ್ದ ಹೆಸರು ಬದಲಾವಣೆಗೆ ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮ ಆಯೋಜಿಸಿತ್ತು. ಈ ಕಾರ್ಯಕ್ರಮವನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟಿಸಿದ್ದರು. ಈ ಹಿನ್ನೆಲೆಯಲ್ಲಿ ಕೆಲವರು ಆರ್ಸಿಬಿ ಪಂದ್ಯ ಸೋಲುವುದಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಕಾರ್ಯಕ್ರಮಕ್ಕೆ ಬಂದಿದ್ದೇ ಕಾರಣ ಎಂದು ನಿಂದಿಸಿ ಪೋಸ್ಟ್ ಮಾಡಿದ್ದರು.

ಸೋಷಿಯಲ್ ಮೀಡಿಯಾದಲ್ಲಿ ತೀವ್ರ ರೀತಿ ವಿರೋಧ ವ್ಯಕ್ತವಾಗುತ್ತಿದ್ದಂತೆ ನಕಲಿ ಎಕ್ಸ್ ಖಾತೆಯನ್ನ ‘ಸುದೀಪ್ ಅಭಿಮಾನಿ’ ಎಂದು ಬದಲಾಯಿಸಿದ್ದಾರೆ. ಈ ಮೂಲಕ ಪುನೀತ್ ಹಾಗೂ ಸುದೀಪ್ ಅಭಿಮಾನಿಗಳ ನಡುವೆ ಸಾಮರಸ್ಯ ಕದಡಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ್ದಾರೆ. ಈ ಸಂಬಂಧ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಅಪ್ಪು ಹುಡುಗರು ಸಂಘಟನೆಯ ಅಧ್ಯಕ್ಷ ಟಿ.ಆಂಜನೇಯ ಆಗ್ರಹಿಸಿದ್ದಾರೆ


Share It

You cannot copy content of this page