ದಾವಣಗೆರೆ: ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜ.೩೧ರಂದು ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರಾದ ಅಯೂಬ್ ಪುತ್ರರಾದ ಹುಸೇನ್(26) ಮತ್ತು ಹಮ್ಜಾ (24) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಜ.೩೧ರಂದು ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗಾಯತ್ರಿ ಹಾಗೂ ಪೇದೆಗಳಾದ ಹರೀಶ್ ಕೆಂಚಪ್ಪ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು.
ಹಲ್ಲೆಯ ನಂತರ ಪರಾರಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಗಳು ಕಾಂಗ್ರೆಸ್ ಮುಖಂಡ ಆಯೂಬ್ ಪುತ್ರರಾಗಿದ್ದು, ಅವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಹುಟುಕಾಟ ನಡೆಸಿದ್ದರು. ಇದೀಗ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.

