ಸಿಂಪಲ್ ಸುನಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ಅವತಾರ ಪುರುಷದ ಟ್ರೇಲರ್ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಅನಾವರಣಗೊಂಡಿತು.
ನೆನಪಿರಲಿ ಪ್ರೇಮ್, ರಿಷಿ, ವಿಕ್ಕಿ ವರುಣ್, ಪ್ರವೀಣ್ ತೇಜ್ ಹಾಗೂ ನಿರ್ದೇಶಕ ಸಂತು ಚಿತ್ರದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಶರಣ್ ಚಿತ್ರಕ್ಕೆ ಸಾಥ್ ನೀಡಿದರು. ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, ಅವತಾರ ಪುರುಷ ಮೊದಲ ಭಾಗವನ್ನು ಚಿತ್ರಮಂದಿರ, ಒಟಿಟಿ ಹಾಗೂ ಖಾಸಗಿ ವಾಹಿನಿಯಲ್ಲಿ ಸಾಕಷ್ಟು ಜನರು ವೀಕ್ಷಿಸಿದ್ದಾರೆ. ಅದೇ ರೀತಿ ಈ ಚಿತ್ರದ ಎರಡನೇ ಭಾಗವನ್ನು ನೋಡಿ ಯಶಸ್ವಿಗೊಳಿಸಿ. ಮೊದಲ ಭಾಗವನ್ನು ನೋಡಿದವರಿಗೆ ಹಾಗೂ ನೋಡದವರಿಬ್ಬರಿಗೂ ಭಾಗ ೨ ಅರ್ಥವಾಗುತ್ತದೆ. ಚಿತ್ರ ಕೂಡ ಚೆನ್ನಾಗಿ ಮೂಡಿ ಬಂದಿದೆ ಎಂದು ತಿಳಿಸಿದರು.
ನಟ ಶರಣ್ ಮಾತನಾಡಿ, ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ನಿರ್ಮಾಪಕ ಪಷ್ಕರ್ ಹಾಗೂ ನಿರ್ದೇಶಕ ಸುನಿ ಅವರ ಜೊತೆ ಕೆಲಸ ಮಾಡಿದ್ದು ಬಹಳ ಖುಷಿಯಾಗಿದೆ. ಸುನಿ ಅವರು ಚಿತ್ರದ ಕಥೆ ಹೇಳುತ್ತೇನೆ ಎಂದಾಗ ಕಾಮಿಡಿ ಜಾನರ್?ನ ಕಥೆ ಅಂದುಕೊAಡಿದ್ದೆ. ಆದರೆ ಅವರು ಇದೊಂದು ವಿಭಿನ್ನ ಕಥೆ. ಈ ಕಥೆಯಲ್ಲಿ ಕಾಮಿಡಿ ಕೂಡ ಇರುತ್ತದೆ ಎಂದರು. ನನಗೂ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಆಸೆ. ಹಾಗಾಗಿ ಈ ಚಿತ್ರದ ಪಾತ್ರ ಇಷ್ಟವಾಯಿತು. ಚಿತ್ರ ತಾಂತ್ರಿಕವಾಗಿ ಶ್ರೀಮಂತಿಕೆಯಿAದ ಮೂಡಿಬಂದಿದೆ ಎಂದು ತಿಳಿಸಿದರು.
ಚಿತ್ರದ ನಾಯಕಿ ಆಶಿಕಾ ರಂಗನಾಥ್ ಮಾತನಾಡಿ, ನಾನು ಬೇರೆ ಭಾಷೆಗಳ ಚಿತ್ರಗಳಲ್ಲಿ ನಟಿಸುತ್ತಿದ್ದಾಗ ಅವತಾರ ಪುರುಷ ೨ ಚಿತ್ರ ಯಾವಾಗ ಬಿಡುಗಡೆ ಎಂದು ಕೇಳುತ್ತಿದ್ದರು. ಜನರಿಗೆ ಈ ಚಿತ್ರದ ಬಗ್ಗೆ ಅಷ್ಟು ಕುತೂಹಲವಿದೆ. ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿದೆ ಎಂದರು.