ಅಪರಾಧ ಸುದ್ದಿ

ಕೌಟುಂಬಿಕ ಕಲಹ ಹಿನ್ನೆಲೆ : ದಂಪತಿ ಆತ್ಮಹತ್ಯೆ

Share It

ಕೆ.ಆರ್.ಪೇಟೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆದಿದೆ.

ದರ್ಶನ್ ಮತ್ತು ದಿವ್ಯಶ್ರೀ ಮೃತ ದುರ್ದೈವಿಗಳು. ಇವರಿಬ್ಬರು 3 ವರ್ಷದ ಹಿಂದೆ ಮದುವೆಯಾಗಿದ್ದರು. ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ.

ಕೆಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲು ಮಾಡಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಎರಡು ವರ್ಷದ ಮಗುವನ್ನು ಸಹ ಕತ್ತು ಹಿಸುಕಿ ಸಾಯಿಸುವ ಪ್ರಯತ್ನವನ್ನು ದಂಪತಿ ಮಾಡಿದ್ದರು ಎಂದು ಹೇಳಲಾಗಿದ್ದು, ಅದೃಷ್ಟವಶಾತ್ ಮಗು ಸಾವಿನಿಂದ ಪಾರಾಗಿದೆ.


Share It

You cannot copy content of this page