ಅಪರಾಧ ಸುದ್ದಿ

ಪದವಿ ಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಗೆ ನಿಷೇಧ

Share It

ಬೆಂಗಳೂರು:ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ಮುಂದೆ ಮೊಬೈಲ್‌ಗಳ ಬಳಕೆಯನ್ನು ನಿಷೇಧಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಘಟನೆಯ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಇಂತಹದ್ದೊAದು ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಕಾಲೇಜುಗಳಲ್ಲಿ ಮೊಬೈಲ್ ನಿಷೇಧದ ಮೂಲಕ ಇಂತಹ ಘಟನೆ ತಡೆಯಲು ಮುಂದಾಗಿದೆ.

ಇತ್ತೀಚೆಗೆ ಪೂರ್ವಸಿದ್ಧತೆ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬAಧ ಕೆಲವರನ್ನು ಬಂಧಿಸಲಾಗಿದೆ. ಇದೀಗ ಜ.೨೭ರಿಂದ ೨ನೇ ಹಂತದ ಪರೀಕ್ಷೆಗಳು ಶುರುವಾಗಲಿವೆ. ಹೀಗಾಗಿ, ಇನ್ಮುಂದೆ ಕಾಲೇಜುಗಳಲ್ಲಿ ಮೊಬೈಲ್ ಬಳಕೆಗೆ ನಿಷೇಧ ಹಾಕುವ ತೀರ್ಮಾನಕ್ಕೆ ಶಿಕ್ಷಣ ಇಲಾಖೆ ಬಂದಿದೆ ಎನ್ನಲಾಗಿದೆ.

ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧದ ಜತೆಗೆ, ಪರೀಕ್ಷೆ ಸಮಯದಲ್ಲಿ ಶಿಕ್ಷಕರಿಗೂ ಮೊಬೈಲ್ ಬಳಕೆ ನಿಷೇದ ಮಾಡಲು ತೀರ್ಮಾನಿಸಲಾಗಿದೆ. ರಾಜ್ಯಮಟ್ಟದ ಪರೀಕ್ಷೆಗಳಿಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆಯನ್ನಿಟ್ಟಿದೆ ಎನ್ನಲಾಗಿದೆ.


Share It

You cannot copy content of this page