ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಅಥಣಿ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತನನ್ನು ನಡುರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ರಾತ್ರಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದ ಖೀಳೆಗಾಂವ – ಅಥಣಿ ರಸ್ತೆಯಲ್ಲಿ ನಡೆದಿದೆ.
ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬುವವರನ್ನು ದುಷ್ಕಮರ್ಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹೊಡೆದು ಕೊಲೆ ಮಾಡಲಾಗಿದೆ. ಎರಡು ಬೈಕಿನಲ್ಲಿ ಬಂದ ಆರು ದುಷ್ಕಮರ್ಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪರಿಣಾಮ ಅಣ್ಣಪ್ಪ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ದುದರ್ೈವಿ ಖೀಳೆಗಾಂವ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಅಣ್ಣಪ್ಪ ನಿಂಬಾಳ ಅವರು, ಅಥಣಿ ಶಾಸಕ ಲಕ್ಷ್ಮಣ್ ಸವದಿ ಮತ್ತು ಕಾಗವಾಡ ಶಾಸಕ ರಾಜು ಕಾಗೆ ಅವರ ಆಪ್ತ ಬಳಗದಲ್ಲಿ ಇವರು ಒಬ್ಬರಾಗಿ ಗುರುತಿಸಿಕೊಂಡಿದ್ದರು. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ