ಹಾವೇರಿ: ಕನ್ನಡ ಚಿತ್ರರಂಗದ ನಟ, ನಿರ್ಮಾಪಕ ದ್ವಾರಕೀಶ್ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗ ಹಾಗೂ ನಾಡಿಗೆ ದೊಡ್ಡ ನಷ್ಟ ಎಂದು ಮಾಜಿ ಸಿಎಂ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದ್ವಾರಕೀಶ್ ಅವರು ಸಿನೆಮಾ ರಂಗದಲ್ಲಿ ಹೊಸತನ ತಂದವರು, ಕಲೆಗೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ತಮ್ಮ ಬದುಕಿನಲ್ಲಿ ಏನೇ ಕಷ್ಟ ಇದ್ದರೂ ಜನರನ್ನು ನಗಿಸುವ ಕೆಲಸ ಮಾಡಿದ್ದಾರೆ ಎಂದರು.
ಸಿನೆಮಾ ರಂಗದಲ್ಲಿ ಯಶಸ್ಸು ಸೋಲು ಕಂಡರೂ ಸಿನೆಮಾ ರಂಗವನ್ನು ಎಂದೂ ಬಿಡಲಿಲ್ಲ.
ದ್ವಾರಕೀಶ್ ಅವರು ಅಗಲಿರುವುದು ಕನ್ನಡ ಚಿತ್ರರಂಗ ಹಾಗೂ ಕನ್ನಡ ನಾಡಿಗೆ ದೊಡ್ಡ ಹಿನ್ನಡೆಯಾಗಿದೆ. ವಯಕ್ತಿಕವಾಗಿ ನನಗೆ ಬಹಳ ದುಖವಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ, ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.