ಬೆಂಗಳೂರು: ಡಿ.1ರೊಳಗೆ ಬಿಬಿಎಂಪಿ ಚುನಾವಣೆ ನಡೆದೇ ನಡೆಯುತ್ತೆ ಎನ್ನುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, 5 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಬಿಎಂಪಿ ಚುನಾವಣೆಯ ಸುಳಿವು ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು, ಡಿ.1ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ನಡೆಸಬೇಕು ಎಂಬ ಇರಾದೆ ನಮಗಿದೆ. ಇದಕ್ಕಾಗಿಯೇ ಸೆ.3ರೊಳಗೆ ವಾರ್ಡ್ ವಿಂಗಡಣೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ವಾರ್ಡ್ ವಿಂಗಡಣೆಗೆ ಅಗತ್ಯ ಸಿಬ್ಬಂದಿಯನ್ನು ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ, ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ಗೆ ಅಫಿಡೇವಿಟ್ ಸಲ್ಲಿಕೆ ಮಾಡಲಾಗುತ್ತದೆ. ಆ ಮೂಲಕ ಡಿ.1ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ನಡೆಸುತ್ತೇವೆ ಎಂದು ಮಹತ್ವದ ಸುಳಿವು ನೀಡಿದ್ದಾರೆ.
