ಅಪರಾಧ ಸುದ್ದಿ

ಬಿಡಿಎ ಕಾರ್ಯಾಚರಣೆ – ಭೀಮನಕುಪ್ಪೆಯಲ್ಲಿ ಆಸ್ತಿ ವಶ

Share It

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ನಡೆದ ಕಾರ್ಯಾಚರಣೆಯಲ್ಲಿ ಭೀಮನಕುಪ್ಪೆ ಗ್ರಾಮದಲ್ಲಿ ಸುಮಾರು ರೂ. 12 ಕೋಟಿ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಭೀಮನಕುಪ್ಪೆ ಗ್ರಾಮದ ಸರ್ವೆ ನಂ. 206/1ರಲ್ಲಿನ 1 ಎಕರೆ 26 ಗುಂಟೆ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಿಸಿಕೊಂಡಿದ್ದ ಕಂದಾಯ ನಿವೇಶನ ಹಾಗೂ ಶೆಡ್ಗಳನ್ನು ತೆರವುಗೊಳಿಸಿ, ಸುಮಾರು 12 ಕೋಟಿ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.

ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ನಾಡಪ್ರಭು ಕೆಂಪೇಗೌಡ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಇವರನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆ ಸಹಕಾರದೊಂದಿಗೆ ನೆರವೇರಿಸಲಾಯಿತು.


Share It

You cannot copy content of this page