ಬೆಳಗಾವಿ: ಅಧಿವೇಶನದ ವೇಳೆಯೇ ಶಿವಸೇನೆ ಪುಂಡಾಟ: ಕರ್ನಾಟಕದ ಬಸ್ ಗೆ ‘ಜೈ ಮಹಾರಾಷ್ಟ್ರ’ ಬರಹ

Share It

ಬೆಳಗಾವಿ: ಕೊಲ್ಲಾಪುರದಲ್ಲಿ ಶಿವಾ ಸೇನೆಯ ಕಾರ್ಯಕರ್ತರು ಕರ್ನಾಟಕದ ಬಸ್ಸಿಗೆ ಜೈ ಮಹಾರಾಷ್ಟ್ರ ಎಂಬ ಸ್ಟಿಕ್ಕರ್ ಅಂಟಿಸಿದ್ದಾರೆ. ಪುಣೆಯಿಂದ ಹಳಿಯಾಳಕ್ಕೆ ಹೊರಟಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಜೈ ಮಹಾರಾಷ್ಟ್ರ ಸ್ಟಿಕ್ಕರ್ ಅಂಟಿಸಿರುವ ಈ ಘಟನೆ ಸೋಮವಾರ ನಡೆದಿದೆ.

ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನಕ್ಕೆ ಪರ್ಯಾಯವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ಮಹಾಮೇಳಾವ ಹಮ್ಮಿಕೊಂಡಿದ್ದು ಇದಕ್ಕೆ ಬೆಳಗಾವಿ ಜಿಲ್ಲಾಡಳಿತ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ಕೊಲ್ಲಾಪುರದಲ್ಲಿ ಶಿವ ಸೇನೆ ಕಾರ್ಯಕರ್ತರು ಅಲ್ಲಿನ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸಂಚಾರ ತಡೆದು ಜೈ ಮಹಾರಾಷ್ಟ್ರ ಸ್ಟಿಕರ್ ಅಂಟಿಸಿದರು.


Share It

You May Have Missed

You cannot copy content of this page