ಬೆಂಗಳೂರು;ಬಳ್ಳಾರಿಯ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ೨೬ ಆರೋಪಿಗಳನ್ನು ಪೊಲೀಸರು ಬೆಂಗಳೂರಿಗೆ ಶಿಫ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ಬಳ್ಳಾರಿ ಜೈಲಿನಲ್ಲಿಡಲಾಗಿತ್ತು. ಇದೀಗ ಪೊಲೀಸರು ಅವರೆಲ್ಲರನ್ನೂ ಬೆಂಗಳೂರಿಗೆ ಶಿಫ್ಟ್ ಮಾಡಿದ್ದಾರೆ. ಘಟನೆಯ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ಕಾರಣ ಅವರನ್ನು ಶಿಫ್ಟ್ ಮಾಡಲಾಗಿದೆ.

