ಮಂಗಳೂರು: ಪೊಲೀಸರಿಗೆ ನಿಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದ್ದು, ಬಂಧನಕ್ಕೆ ಪೊಲೀಸರು ಅವರ ನಿವಾಸಕ್ಕೆ ಆಗಮಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗರ್ಗಾಡಿ ಗ್ರಾಮದಲ್ಲಿರುವ ಹರೀಶ್ ಪೂಂಜಾ ಅವರ ನಿವಾಸಕ್ಕೆ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಭೇಟಿ ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ಮನೆಯಲಕ್ಲಿಯೇ ಇದ್ದು, ಹೊರಬಂದ ತಕ್ಷಣ ವಶಕ್ಕೆ ಪಡೆಯಲು ಪೊಲೀಸರು, ಮನೆಯ ಬಾಗಿಲಲ್ಲೇ ಕಾಯುತ್ತಿದ್ದಾರೆ.
ಅಕ್ರಮ ಮರಳು ಗಣಿಗಾರಿಕೆಯಲ್ಲಿ ಆರೆಸ್ಟ್ ಆಗಿದ್ದ, ಬಿಜೆಪಿ ಕಾರ್ಯಕರ್ತರ ಪರವಾಗಿ ಪೊಲೀಸ್ ಠಾಣೆಗೆ ನುಗ್ಗಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಜತೆಗೆ, ಪೊಲೀಸ್ ಠಾಣೆಯನ್ನು ದ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಾಸಕರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
ಡಿ.ಜೆ.ಹಳ್ಳಿ ಮತ್ತು ಕೆ.ಜೆ. ಹಳ್ಳಿ ಪ್ರಕರಣದಲ್ಲಿ ಪೊಲೀಸ್ ಠಾಣೆಗೆ ಆದ ಗತಿಯನ್ನು ನೋಡಿದ್ದೀರಲ್ಲಾ, ಅದೇ ಪರಿಸ್ಥಿತಿ ನಿಮ್ಮ ಠಾಣೆಗೂ ಬರುತ್ತದೆ. ನಿಮ್ಮಪ್ಪನದಾ ಪೊಲೀಸ್ ಸ್ಟೇಷನ್ ಎಂದೆಲ್ಲ ಪೊಲೀಸರನ್ನು ನಿಂದಿಸಿದ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿದ್ದು, ವಶಕ್ಕೆ ಪಡೆಯಲು ಪೊಲೀಸರು ಸಜ್ಜಾಗಿದ್ದಾರೆ.