ಬೆಂಗಳೂರು: ಗುತ್ತಿಗೆದಾರನೊಬ್ಬ ಜಿಬಿಎ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ್ದು, ಈ ಸಂಬAಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗುತ್ತಿಗೆದಾರ ನಂದೀಶ್ ಎಂಬಾತ ಕಚೇರಿಗೆ ನುಗ್ಗಿ ಜಿಬಿಎ ಅಧಿಕಾರಿ ಸಂಗೀತಾ ಎಂಬುವವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು ಎನ್ನಲಾಗಿದೆ. ಈ ಸಂಬAಧ ಸಂಗೀತಾ ಅವರು, ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರು ನೀಡಿದ್ದ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿ ಹೇಳಿಕೆ ನೀಡಲು ಬಾಗಲಗುಂಟೆ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಕೈಗೊಂಡಿದ್ದಾರೆ. ಗುತ್ತಿಗೆದಾರ ಸಧ್ಯಕ್ಕೆ ತಲೆಮರೆಸಿಕೊಂಡಿದ್ದಾನೆ.

