ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ (Dharwad Yogesh Gowda Murder Case) ಅಂತಿಮ ತೀರ್ಪು ಪ್ರಕಟವಾಗಿದೆ. ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 21ರ ಪೈಕಿ 19 ಮಂದಿ ಆರೋಪಿಗಳು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Bengaluru Special Court Verdict) ಇಂದು (ಏಪ್ರಿಲ್ 15) ತೀರ್ಪು ನೀಡಿ ಆದೇಶ ಹೊರಡಿಸಿದೆ.
21 ಆರೋಪಿಗಳ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇದರಿಂದ ಇವರಿಬ್ಬರನ್ನು ಹೊರತುಪಡಿಸಿ ಉಳಿದವರ ತೀರ್ಪು ಪ್ರಕಟಿಸಿದೆ.
ಎ2 ವಿಕ್ರಮ್, ಎ3 ಕೀರ್ತಿ ಕುಮಾರ್, ಎ 4 ಸಂದೀಪ್, ಎ5 ವಿನಾಯಕ್, ಎ6 ಮಹಾಬಲೇಶ್ವರ್ ಅಲಿಯಾಸ್ ಮುದಕ, ಎ 7 ಸಂತೋಷ್, ಎ 8 ದಿನೇಶ್, ಎ 9 ಅಶ್ವಥ್, ಎ10 ಸುನಿಲ್, ಎ 11 ನಜೀರ್ ಅಹಮದ್, ಎ 12 ಷಾನವಾಜ್, ಎ 13 ನೂತನ್ , ಎ14 ಹರ್ಷಿತ್, ಎ15 ವಿನಯ್ ಕುಲಕರ್ಣಿ, ಎ 16 ಚಂದ್ರು ಮಾಮ, ಎ18 ವಿಕಾಸ್ ಕಲಬುರ್ಗಿ, ಎ 19 ಚನ್ನಕೇಶವ ಟಿಂಗರಿಕರ್, ಎ20 ವಾಸುದೇವ ನಿಲೇಕಣಿ, ಎ21 ಸೋಮಶೇಖರ್ ನ್ಯಾಮಗೌಡ

